ಜಿಲ್ಲಾ ನಾಮಧಾರಿ ಸಂಘದ ವಾರ್ಷಿಕ ಸ್ನೇಹ ಸಮ್ಮೇಳನದಲ್ಲಿ ಪ್ರತಿಭಾ ಪುರಸ್ಕಾರ
ಬೆಂಗಳೂರು : ಉತ್ತರಕನ್ನಡ ಜಿಲ್ಲೆಯ ಕಾರವಾರದಲ್ಲಿ ನಾಮಧಾರಿ ಅಭಿವೃದ್ಧಿ ಸಂಘದಿಂದ ವಾರ್ಷಿಕ ಸ್ನೇಹ ಸ್ಮೇಳನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು.
ಅಬಕಾರಿ ಉಪ ಆಯುಕ್ತರಾಗಿರುವ ಜಗದೀಶ ನಾಯ್ಕ ಕಾರ್ಯಕ್ರಮ ಉದ್ಘಾಟಿಸಿದ್ದರು. ಕಾರ್ಯಕ್ರಮದಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾಗಿರುವ ಉದಯ ಎಂ ನಾಯ್ಕ, ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಸಿ ಡಿ ನಾಯ್ಕ ಮುಖ್ಯ ಅಥಿತಿಗಳಾಗಿ ಆಗಮಿಸಿದ್ದರು. ಉತ್ತರಕನ್ನಡ ಜಿಲ್ಲಾ ನಾಮಧಾರಿ ಅಭಿವೃದ್ಧಿ ಸಂಘದ ಅಧ್ಯಕ್ಷ ವಿಜಯಕುಮಾರ ಆರ್ ನಾಯ್ಕ ಅಧ್ಯಕ್ಷತೆ ವಹಿಸಿದ್ದರು.
ಬಳಿಕ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ಹಾಗೂ ಗೌರವ ಧನ ನೀಡುವ ಮೂಲಕ ವಿದ್ಯಾರ್ಥಿಗಳನ್ನ ಗೌರವಿಸಲಾಯಿತು. ನಂತರ ಸಮಾಜದ ವಿಶೇಷ ಸಾಧಕರಿಗೆ ಸನ್ಮಾನವೂ ಸೇರಿದಂತೆ ಇತರೆ ಕಾರ್ಯಕ್ರಮಗಳು ನೆರವೇರಿಸಲಾಯಿತು.