ಶ್ರೀ ನಾರಾಯಣಗುರು ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ಮುಖ್ಯಮಂತ್ರಿ ಭೇಟಿಯಾದ ನಿಯೋಗ
ಬೆಂಗಳೂರು : ಇಂದು ಮಂಗಳವಾರ ಕರ್ನಾಟಕ ಆರ್ಯ ಈಡಿಗ ಸಂಘದ ವತಿಯಿಂದ ಶ್ರೀ ಶ್ರೀ ನಾರಾಯಣಗುರು ಮೆಡಿಕಲ್ ಕಾಲೇಜು ನಿರ್ಮಾಣದ ಕುರಿತು ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪನವರಿಗೆ ಮನವಿ ಸಲ್ಲಿಸಲಾಯಿತು.
ಆರ್ಯ ಈಡಿಗ ಅಥವಾ ನಾಮಧಾರಿ ಮತ್ತು ಧೀವರ ಮತ್ತು 26 ಅನೇಕ ಸಮಾಜಗಳ ವತಿಯಿಂದ ಮುಖ್ಯಮಂತ್ರಿಗಳಾದ ಶ್ರೀ ಬಿ ಎಸ್ ಯಡಿಯೂರಪ್ಪನವರನ್ನು ಭೇಟಿ ಮಾಡಿದ ನಿಯೋಗದಲ್ಲಿ ಸಂಘದ ಅಧ್ಯಕ್ಷರಾದ ಶ್ರೀ ತಿಮ್ಮೇಗೌಡ, ಸಂಪುಟ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಮತ್ತು ಶಾಸಕರಾದ ಕುಮಾರ ಬಂಗಾರಪ್ಪ, ಸುನೀಲ್ ನಾಯ್ಕ ಹಾಗೂ ರಾಜ್ಯದಲ್ಲಿನ ಸಂಘದ ಜಿಲ್ಲಾಧ್ಯಕ್ಷರು, ಪದಾಧಿಕಾರಿಗಳು ಹಾಗೂ ಅನೇಕ ಮುಖಂಡರನ್ನು ಜೊತೆಗೂಡಿ ತೆರಳಿದ್ದರು. ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಸಮಾಜಕ್ಕೆ ಬೇಕಾದ ಸವಲತ್ತುಗಳಿಗೆ ವಿನಂತಿ ಮಾಡಿ ರಾಜ್ಯದಲ್ಲಿ ಶ್ರೀ ಶ್ರೀ ನಾರಾಯಣ ಗುರುಗಳ ಹೆಸರಿನಲ್ಲಿ ಮೆಡಿಕಲ್ ಕಾಲೇಜು ನಿರ್ಮಾಣ ಮಾಡುವ ಪ್ರಸ್ತಾವನೆಯನ್ನು ಮುಂದಿಡಲಾಗಿದೆ.
ಬಳಿಕ ಮಾದ್ಯಮಗಳೊಂದಿಗೆ ಮಾತನಾಡಿದ ಕುಮಾರ ಬಂಗಾರಪ್ಪ ಅವರು, ಈ ವಿಷಯಕ್ಕೆ ಮುಖ್ಯಮಂತ್ರಿಗಳು ಉತ್ತಮವಾಗಿ ಸ್ಪದಿಸಿದ್ದು, ಶಿಘ್ರವಾಗಿ ಇದೇ ಬರುವ ಬಜೆಟ್ ನಲ್ಲಿ ಘೊಷಣೆ ಮಾಡುವ ಭರವಸೆಯನ್ನು ನೀಡಿರುತ್ತಾರೆ. ಅವರಿಗೆ ಸಮಾಜದ ಮತ್ತು ರಾಜ್ಯದ ಜನತೆಯ ಪರವಾಗಿ ಹೃದಯಪೂರ್ವಕ ಅಭಿನಂದನೆಗಳು, ಎಂದು ತಿಳಿಸಿದ್ದಾರೆ. ಅಲ್ಲದೇ, ಈ ಮೆಡಿಕಲ್ ಕಾಲೇಜನ್ನು ನಿರ್ಮಿಸಲು ಸ್ಥಳವನ್ನು ಇನ್ನೆರಡು ದಿನಗಳಲ್ಲಿ ಅಂತಿಮಗೊಳಿಸಲಾಗುವುದು, ಎಂದು ಕುಮಾರ ಬಂಗಾರಪ್ಪ ತಿಳಿಸಿದ್ದಾರೆ.