ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಿಗೆ ಅರ್ಜಿ ಆಹ್ವಾನ:ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
ಕಾರವಾರ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಸಾಮಾನ್ಯ ಹಾಗೂ ಮಾದರಿ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ1, 2ಎ, 2ಬಿ, 3ಎ, 3ಬಿ ಪ.ಜಾ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ 2018-19 ನೇ ಸಾಲಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಬಯಸುವವರು ಇಲಾಖಾ ವೆಬ್‍ಸೈಟ್ http://www.backwardclasses.kar.nic.in/ ಮೂಲಕ ಅರ್ಜಿ ಸಲ್ಲಿಸಬೇಕು ಅರ್ಜಿ ಸಲ್ಲಿಸಲು ಜುಲೈ 20 ಕೊನೆಯ ದಿನವಾಗಿರುತ್ತದೆ.
ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‍ಸೈಟ್ ನೋಡಬಹುದು. ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ bcw.hostels@karnataka.gov.in ಹಾಗೂ dobcmuttarakannada@gmail.com ಗೆ ಇ-ಮೇಲ್ ಮುಖಾಂತರ ಅಥವಾ ಜಿಲ್ಲಾ/ತಾಲ್ಲೂಕು ಅಧಿಕಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸುವುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ :08382-226588 ಸಂಪರ್ಕಿಸುವಂತೆ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.